ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರ

ಒಡಿಯೂರಿನಲ್ಲಿ ನಡೆದ ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರ🙏
ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ ಬೆಂಗಳೂರು, ಎಸ್ಸಿಲೋರ್ ವಿಷನ್ ಫೌಂಡೇಶನ್, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ದಶಂಬರ 29ನೇ ಆದಿತ್ಯವಾರ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಕರೋಪಾಡಿ ಗ್ರಾಮ ಪಂಚಾಯತ್‍ನ ಅಧ್ಯಕ್ಷೆ ಶ್ರೀಮತಿ ಬೇಬಿ ಆರ್. ಶೆಟ್ಟಿ, ಬೆಂಗಳೂರು ವಿಷನ್ ಫೌಂಡೇಶನ್‍ನ ಶ್ರೀ ಧರ್ಮಪ್ರಸಾದ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಲ| ಎ. ಸುರೇಶ್ ರೈ, ಬಿ.ಸಿ.ರೋಡ್ ರಂಗೋಲಿ ಹೋಟೆಲ್‍ನ ಮ್ಹಾಲಕ ಶ್ರೀ ಚಂದ್ರಹಾಸ ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಸರ್ವಾಣಿ ಪಿ. ಶೆಟ್ಟಿ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಶ್ರೀ ಕಿರಣ್ ಉರ್ವ, ಯೋಜನೆಯ ಕರೋಪಾಡಿ ಗ್ರಾಮಸಮಿತಿಯ ಅಧ್ಯಕ್ಷ ಶ್ರೀ ರಘುನಾಥ ಶೆಟ್ಟಿ ಪಟ್ಲಗುತ್ತು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೇತ್ರತಜ್ಞೆ  ಡಾ.ಸುಧಾರಾಣಿ ಉಪಸ್ಥಿತರಿದ್ದು ಶುಭಹಾರೈಸಿದರು.

ಸುಮಾರು 200ಕ್ಕೂ ಮಿಕ್ಕಿ ಬಂಧುಗಳು ಈ ಶಿಬಿರದ ಸದುಪಯೋಗವನ್ನು ಪಡೆದರು. 40ಕ್ಕೂ ಮಿಕ್ಕಿ ಶಿಬಿರಾರ್ಥಿಗಳನ್ನು ಕಣ್ಣಿನ ಪೊರೆಯ ಚಿಕಿತ್ಸೆಗೆ ವೈದ್ಯರು ಸೂಚಿಸಿದರು. ಅವರಿಗೆ ಮಂಗಳೂರಿನ ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು. 130 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು.

Leave a Reply

Contact us at the Consulting WP office nearest to you or submit a business inquiry online.

See our gallery

Looking for Help in Financial Services? Request a Callback.